ಒಳಮೀಸಲಾತಿ: ನೇಮಕಾತಿಗೆ ಸೂಚನೆ
12/09/2025
ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಅಳವಡಿಸಿಕೊಂಡು ರಾಜ್ಯ ಸರ್ಕಾರದ ವಿವಿಧ ಇಲಾಖೆ ಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಪ್ರಕ್ರಿಯೆ ಆರಂಭಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ಸೂಚನೆ ನೀಡಿದೆ.
ಒಳ ಮೀಸಲಾತಿ ಜಾರಿಗೊಳಿಸುವ ಸಂಬಂಧ ಶಿಫಾರಸು ಮಾಡಲು ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಅಧ್ಯಕ್ಷತೆಯಲ್ಲಿ ಆಯೋಗ ರಚಿಸಿದ ಕಾರಣ ಸರ್ಕಾರಿ ಹುದ್ದೆಗಳಿಗೆ ಹೊಸತಾಗಿ ನೇರ ನೇಮಕಾತಿ ಪ್ರಕ್ರಿಯೆಗೆ ತಡೆ ನೀಡಲಾಗಿತ್ತು.
ಆಯೋಗ ನೀಡಿದ್ದ ವರದಿಯನ್ನು ಕೆಲವು ಬದಲಾವಣೆ ಮಾಡಿಕೊಂಡು ಅಂಗೀಕರಿಸಿ, ‘ಪರಿಷ್ಕೃತ ಮೀಸಲಾತಿ ರೋಸ್ಟರ್’ ಅನ್ನು ಈಗಾಗಲೇ ಪ್ರಕಟಿಸಿದೆ.
‘ಒಳ ಮೀಸಲಾತಿ ಜಾರಿಗೆ ಬಂದಿರು ವುದರಿಂದ ಎಲ್ಲ ಇಲಾಖೆಗಳು ಮತ್ತು ನೇಮಕಾತಿ ಪ್ರಾಧಿಕಾರಗಳು ನೇರ ನೇಮ ಕಾತಿ ಪ್ರಕ್ರಿಯೆ ಕೈಗೊಳ್ಳಬಹುದು’ ಎಂದು ಡಿಪಿಎಆರ್ ಕಾರ್ಯದರ್ಶಿ ಕೆ.ಜಿ. ಜಗದೀಶ್ ಆದೇಶದಲ್ಲಿ ತಿಳಿಸಿದ್ದಾರೆ.