ಲಂಚ ಪಡೆದು ವೈದ್ಯಕೀಯ ಸಂಸ್ಥೆಗೆ ಪೂರಕ ವರದಿ ಸಲ್ಲಿಕೆ ಮಿಮ್ಸ್ ವೈದ್ಯ ಸೇರಿ ಮೂವರು ಅಮಾನತ್ತು
ವೈದ್ಯಕೀಯ ಕ್ಷೇತ್ರದಲ್ಲಿ ಅತಿ ದೊಡ್ಡ ಹಗರಣ ಬೆಳಕಿಗೆ ತಂದ ಸಿಬಿಐ
ಬೆಂಗಳೂರು: ಭಾರತೀಯ ವೈದ್ಯಕೀಯ ಆಯೋಗದ ಪರಿವೀಕ್ಷಕರ ತಂಡದಲ್ಲಿ ನಿಯೋಜಿತರಾಗಿ ಖಾಸಗಿ ವೈದ್ಯಕೀಯ ಕಾಲೇಜು ಸಂಸ್ಥೆಗಳಿಗೆ ಅನುಕೂಲಕರವಾದ ತಪಾಸಣಾ ವರದಿ ನೀಡಲು ಲಂಚ ಸ್ವೀಕರಿಸಿದ ಆರೋಪದ ಮೇರೆಗೆ ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮೂಳೆ ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಡಾ. ಸಿ. ಎನ್.ಮಂಜಪ್ಪ ಸೇರಿದಂತೆ ಮೂವರು ವೈದ್ಯರನ್ನು ವೈದ್ಯಕೀಯ ಶಿಕ್ಷಣ ಇಲಾಖೆ ಅಮಾನತ್ತು ಮಾಡಿ ಆದೇಶ ಹೊರಡಿಸಿದೆ
ಡಾ. ಚೈತ್ರ, ಡಾ. ಮಂಜಪ್ಪ, ಡಾ. ಅಶೋಕ್ ಸೆಲ್ಲೆ ಅವರು ಛತ್ತೀಸ್‌ಗಡ ರವತ್ ಪುರ ಸರ್ಕಾರ್ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಅಂಡ್ ರೀಸರ್ಚ್‌ಗೆ ಅನುಕೂಲಕರವಾದ ತಪಾಸಣಾ ವರದಿಯನ್ನು ನೀಡುವ ಸಂಬಂಧ ಲಂಚ ಪಡೆದಿರುತ್ತಾರೆ. ಇವರನ್ನು ಸಿಬಿಐ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಅಮಾನತ್ತು
ಈ ಹಿನ್ನೆಲೆಯಲ್ಲಿ ಈ ಮೂವರ ಅಮಾನತ್ತಿಗೆ ಇಲಾಖೆಯ ನಿಯಮಾನುಸಾರ ಕ್ರಮ ಕೈಗೊಳ್ಳಲಾಗಿದೆ ಎಂದು ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಸೀನ್ ಆದೇಶದಲ್ಲಿ ತಿಳಿಸಿದ್ದಾರೆ.
ಡಾ. ಚೈತ್ರ, ಡಾ. ಮಂಜಪ್ಪ, ಡಾ. ಅಶೋಕ್ ಸೆಲ್ಕೆ ಅವರು ಛತ್ತೀಸ್‌ಗಡ ರವತ್‌ಪುರ ಸರ್ಕಾರ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಅಂಡ್ ರೀಸರ್ಚ್‌ಗೆ ಅನುಕೂಲಕರವಾದ ತಪಾಸಣಾ ವರದಿಯನ್ನು ನೀಡುವ ಸಂಬಂಧ ಲಂಚ ಪಡೆದಿರುತ್ತಾರೆ. ಇವರನ್ನು ಸಿಬಿಐ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಎಲ್ಲ ವಿಷಯಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ಇಲಾಖೆಯ ಮುಖ್ಯ ಕಾರ್ಯದರ್ಶಿಗಳು ಮೂವರು ವೈದ್ಯರನ್ನೂ ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ.