ಲೋಕಾಯುಕ್ತ ಬಲೆಗೆ ಹೆಡ್ ಕಾನ್‌ಸ್ಟೆಬಲ್
08/11/2025

ವೆಂಕಟೇಶ್
ಮಳವಳ್ಳಿ: ರೌಡಿ ಪಟ್ಟಿಗೆ ಸೇರಿಸುವುದಾಗಿ ಬೆದರಿಸಿ ಆರೋಪಿಯಿಂದ ₹5 ಸಾವಿರ ಲಂಚ ಪಡೆಯುತ್ತಿದ್ದ ಗ್ರಾಮಾಂತರ ಠಾಣೆಯ ಹೆಡ್ ಕಾನ್‌ಸ್ಟೆಬಲ್ ವೆಂಕಟೇಶ್ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದರು.
ಜಾಮೀನು ಪಡೆದು ಬಿಡುಗಡೆಯಾಗಿದ್ದ ತಾಲ್ಲೂಕಿನ ಅಂಚೆದೊಡ್ಡಿ ಗ್ರಾಮದ ನವೀನ್ ಲೋಕಾಯುಕ್ತ ಪೋಲೀಸರಿಗೆ ದೂರು ಸಲ್ಲಿಸಿದ್ದರು. ಗುರುವಾರ ರಾತ್ರಿ ಠಾಣೆಯ ಎದುರಿನ ಹೋಟೆಲ್‌ವೊಂದರ ಬಳಿ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಸಿಬ್ಬಂದಿ ದಾಳಿ ಕಾರ್ಯಾಚರಣೆ ನಡೆಸಿದರು.


