Sunday, March 29, 2026
spot_img

ರಾಜ್ಯದಲ್ಲಿ ಆಟೋ ಗ್ಯಾಸ್‌ ಕೊರತೆಯಿಲ್ಲ:ಆಹಾರ ಇಲಾಖೆ ಪ್ರಕಟಣೆ

*ಕರ್ನಾಟಕ ರಾಜ್ಯದಲ್ಲಿ ಆಟೋ ಎಲ್‌ಪಿಜಿ ಸರಬರಾಜು ಸ್ಥಿತಿಗತಿ*

*ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆಯಿಲ್ಲದೆ ಎಲ್‌ಪಿಜಿ ಸರಬರಾಜು*

*ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ*

​ಬೆಂಗಳೂರು, ಮಾರ್ಚ್ ‌29, (ಕರ್ನಾಟಕ ‌ವಾರ್ತೆ) :

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ ಇಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಎಲ್‌ಪಿಜಿ ಸರಬರಾಜು ವ್ಯವಸ್ಥೆಯನ್ನು, ವಿಶೇಷವಾಗಿ ಆಟೋ ಎಲ್‌ಪಿಜಿ ಪೂರೈಕೆಯನ್ನು ರಾಜ್ಯ ಸರ್ಕಾರವು ನಿಕಟವಾಗಿ ಗಮನಿಸುತ್ತಿದೆ. ಕರ್ನಾಟಕದಾದ್ಯಂತ ಒಟ್ಟು 72 ಆಟೋ ಎಲ್‌ಪಿಜಿ ಡಿಸ್ಪೆನ್ಸಿಂಗ್ ಸ್ಟೇಷನ್‌ಗಳು (ALDS) ಕಾರ್ಯನಿರ್ವಹಿಸುತ್ತಿವೆ. ಇವುಗಳಲ್ಲಿ ಕೇವಲ ಬೆಂಗಳೂರು ನಗರವೊಂದರಲ್ಲೇ 31 ಕೇಂದ್ರಗಳು ಲಭ್ಯವಿವೆ.

ಸಾರ್ವಜನಿಕ ವಲಯದ ಪ್ರಮುಖ ತೈಲ ಮಾರಾಟ ಕಂಪನಿಗಳಾದ (OMCs) IOCL, BPCL ಮತ್ತು HPCL ಮೂಲಕ ಆಟೋ ಎಲ್‌ಪಿಜಿ ಸರಬರಾಜು ಮಾಡಲಾಗುತ್ತಿದೆ. ಪ್ರಸ್ತುತ ಈ ಸಂಸ್ಥೆಗಳು ಪ್ರತಿ ಲೀಟರ್‌ಗೆ ರೂ. 77.74 ರ ದರದಲ್ಲಿ ಆಟೋ ಎಲ್‌ಪಿಜಿ ಪೂರೈಸುತ್ತಿವೆ.

ಕಳೆದ ವಾರದಲ್ಲಿ ದಿನಕ್ಕೆ ಸರಾಸರಿ 64.9 ಮೆಟ್ರಿಕ್ ಟನ್ ಆಟೋ ಎಲ್‌ಪಿಜಿಯನ್ನು ವಿತರಿಸಲಾಗಿದೆ. ಸಂಘರ್ಷದ ಮೊದಲು ಈ ಪ್ರಮಾಣವು ದಿನಕ್ಕೆ 57.6 ಮೆಟ್ರಿಕ್ ಟನ್ ಇತ್ತು. ಇದು ಪೂರೈಕೆಯಲ್ಲಿನ ಗಮನಾರ್ಹ ಹೆಚ್ಚಳವನ್ನು ತೋರಿಸುತ್ತದೆ.

ರಾಜ್ಯದಾದ್ಯಂತ ಪ್ರತಿದಿನ ಸುಮಾರು 4 ಲಕ್ಷ ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್‌ಗಳು ಹಾಗೂ ಸುಮಾರು 18,000 ವಾಣಿಜ್ಯ ಬಳಕೆ ಸಿಲಿಂಡರ್‌ಗಳನ್ನು ಪೂರೈಕೆ ಮಾಡಲಾಗುತ್ತಿದೆ.

​ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆಯಿಲ್ಲದೆ ಎಲ್‌ಪಿಜಿ ಸರಬರಾಜು ಆಗುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯ ಸರ್ಕಾರವು ನಿರಂತರವಾಗಿ ಪರಿಸ್ಥಿತಿಯ ಮೇಲೆ ನಿಗಾ ಇರಿಸಿದೆ‌ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles

error: Content is protected !!