Monday, September 21, 2026
spot_img

ಸೆ ೨೫ ರಿಂದ ಕನಿಷ್ಟ ವೇತನ ಜಾರಿಗಾಗಿ ಶಾಸಕರ ಮನೆಗೆ ಮುತ್ತಿಗೆ

ನಾಲ್ಕು ಕಾರ್ಮಿಕ ಸಂಹಿತೆಗಳ ರದ್ದತಿಗಾಗಿ, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗಾಗಿ, ಗುತ್ತಿಗೆ ಹಾಗೂ ಸ್ಕೀಮ್ ನೌಕರರ ಖಾಯಂಗಾಗಿ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆಗೆ ಒತ್ತಾಯಿಸಿ ಸೆಪ್ಟಂಬರ್ 25 ರಂದು ಸಿಐಟಿಯು ಸಂಯೋಜಿತ 184 ಸಂಘಗಳಿಂದ ಶಾಸಕರು ಮತ್ತು ಸಚಿವರ ಮನೆಗಳ ಮುಂದೆ ಪ್ರತಿಭಟನೆ ನಡೆಸಲು ಸಿ ಐ ಟಿ ಯು ರಾಜ್ಯ ಸಮಿತಿಸೆಪ್ಟೆಂಬರ್ 25 ರಿಂದ ಶಾಸಕರ ಸಚಿವರ ಮನೆ ಮುಂದೆ ಪ್ರತಿಭಟನೆ ನಡೆಸಲಿದೆ ಎಂದು ಸಿ ಐ ಟಿ ಯು ನ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಎಸ್.
ವರಲಕ್ಷ್ಮಿ ಸುದ್ದಿಗಾರರಿಗೆ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ನಾಲ್ಕು ಕಾರ್ಮಿಕ ಸಂಹಿತೆ ಹಿಂಪಡೆಯಲು ತಡೆಹಿಡಿದಿರುವ ಕನಿಷ್ಠ ವೇತನ ಜಾರಿ ಸೇರಿದಂತೆ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಒತ್ತಾಯಿಸಿ ಸೆಪ್ಟಂಬರ್ 25 ರಂದು ಸಿಐಟಿಯು ಸಂಯೋಜಿತ 184 ಸಂಘಗಳಿಂದ ಶಾಸಕರು ಮತ್ತು ಸಚಿವರ ಮನೆಗಳ ಮುಂದೆ ಪ್ರತಿಭಟನೆ ನಡೆಸಲು ಸಿ ಐ ಟಿ ಯು ರಾಜ್ಯ ಸಮಿತಿ ತೀರ್ಮಾನಿಸಿದೆ.

ಇದರ ಭಾಗವಾಗಿ ರಾಜ್ಯದ್ಯಂತ ಎಲ್ಲಾ ಜಿಲ್ಲಾ ಕೇಂದ್ರ ಮತ್ತು ತಾಲೂಕು ಕೇಂದ್ರ ಬೆಂಗಳೂರು ಸೇರಿದಂತೆ ಶಾಸಕರು ಮತ್ತು ಸಚಿವರ ಮನೆ ಮುಂದೆ ಪ್ರತಿಭಟನೆ ನಡೆಸಲಾಗುವುದು.
ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತು ತಪ್ಪಿದೆ. ಹಿಂದಿನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರ ಸರ್ಕಾರ ಮಾಡಿದ ವೇತನ ಪರಿಷ್ಕರಣೆ ಮಾಡಿ ಹಣಕಾಸು ಇಲಾಖೆ ಒಪ್ಪಿಗೆ ನೀಡಿ ಎರಡು ತಿಂಗಳು ಹೆಚ್ಚಳವಾದ ವೇತನವನ್ನು ಪಾವತಿಸಲಾಗಿದೆ. ಆದರೆ ಅದೇ ಕಾಂಗ್ರೆಸ್ ಸರಕಾರದ ಈಗಿನ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ವೇತನ ಹೆಚ್ಚಳ ವಾಪಸ್ಸು ಪಡೆದಿರುವುದು ಕಾರ್ಮಿಕ ವಿರೋಧಿಯಾಗಿದೆ ಎಂದರು.

ಉಪಮುಖ್ಯಮಂತ್ರಿ ಡಾ. ಪರಮೇಶ್ವರವರ ನೇತೃತ್ವದ ಕ್ಯಾಬಿನೆಟ್ ಸಬ್ ಕಮಿಟಿ ರಚನೆ ಮಾಡಿರುವುದು ಸರಿಯಾದ ಕ್ರಮವಲ್ಲ. ಆದುದರಿಂದ ಸೆಪ್ಟೆಂಬರ್ 8ರಂದು ವಿಧಾನಸೌಧ ಚಲೋ ಪ್ರತಿಭಟನೆಯಲ್ಲಿ ಮನವಿ ಪಡೆದ ಕಾರ್ಮಿಕ ಸಚಿವ ಸಂತೋಷ್ ಲಾಡು ಸೆ 15 ರಂದು ಎಲ್ಲಾ ಕಾರ್ಮಿಕರ ಸಂಘಟನೆಗಳನ್ನು ಸಭೆ ಕರೆದು ಕನಿಷ್ಟ ವೇತನ ಸಮಸ್ಯೆ ಇತ್ಯರ್ಥಗೊಳಿಸುವುದಾಗಿ ಭರವಸೆ ನೀಡಿದ್ದರು.

ಅವರ ಮನವಿಯನ್ನು ಪುರಸ್ಕರಿಸಿ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಯಿತು. ಆದರೆ ಇಲ್ಲಿವರೆಗೂ ಯಾವುದೇ ಸಭೆಯನ್ನು ಆಯೋಜಿಸದೆ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಇದೇ ರೀತಿ ಕಾಂಗ್ರೆಸ್ ಸರ್ಕಾರ ಮುಂದುವರೆದರೆ ಮುಂದಿನ ಚುನಾವಣೆಯಲ್ಲಿ ಕಾರ್ಮಿಕರು ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಎಂ ಶಿವಕುಮಾರ್ ಸಿ ಕುಮಾರಿ ಮಾದೇವಮ್ಮ ಶಶಿಕಲಾ ಚಂದ್ರಶೇಖರ್ ಭಾಗವಹಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles

error: Content is protected !!