Thursday, September 24, 2026
spot_img

ಆ ೧೧ ರಿಂದ ಕೆ ಆರ್ ಎಸ್ ನಲ್ಲಿ ವಿವಾದಿತ ಕಾವೇರಿ ಆರತಿಗೆ ಚಾಲನೆ

*ಅ. 11 ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಸಚಿವ ಎನ್. ಚಲುವರಾಯಸ್ವಾಮಿ*

*​ಯಾವುದೇ ಲೋಪವಿಲ್ಲದೆ ಅಚ್ಚುಕಟ್ಟಾಗಿ ಕಾವೇರಿ ಆರತಿ ಆಯೋಜಿಸಿ: ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ*

*​ಬೆಂಗಳೂರು/ಮಂಡ್ಯ (ಸೆ.23):* ಕಳೆದ ಬಾರಿ ರೈತರ ತೀವ್ರ ವಿರೋಧಕ್ಕೆ ಕಾರಣವಾಗಿದ್ದ ಕಾವೇರಿ ಆರತಿಯನ್ಮು ಆಯೋಜಿಸಲು ಸರಕಾರ ತೀರ್ಮಾನಿಸಿದೆ.

ಈ ಸಂಬಂದ ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಸಭೆ ನಡೆದಿದ್ದು ಸಭೆಯಲ್ಲಿ ಸಚಿವರು.
ಕಾವೇರಿ ಆರತಿಯನ್ನು ತುರ್ತಾಗಿ ಆಯೋಜಿಸುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಸಮಸ್ಯೆಗಳು ಎದುರಾಗಬಾರದು. ಕಳೆದ ಬಾರಿ ಕಾವೇರಿ ಆರತಿ ಆಯೋಜನೆಯಲ್ಲಿ ತೊಡಗಿಸಿಕೊಂಡಿದ್ದ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನೇ ಬಳಸಿಕೊಂಡು ಸಂಪ್ರದಾಯಬದ್ಧವಾಗಿ ಕಾರ್ಯಕ್ರಮ ನಡೆಸಿ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿರೂ ಆದ ಜಲಸಂಪನ್ಮೂಲ ಎಂದು ತಿಳಿಸಿದರು.

​ಶ್ರೀರಂಗಪಟ್ಟಣ ದಸರಾ ಅಂಗವಾಗಿ ಕಾವೇರಿ ಆರತಿ ನಡೆಸುವ ಸಂಬಂಧ ವಿಕಾಸಸೌಧದಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳ ನಿರ್ದೇಶನದಂತೆ ಅಚ್ಚುಕಟ್ಟಾಗಿ ಕಾವೇರಿ ಆರತಿ ನೆರವೇರಿಸಬೇಕು. ಈ ಹಿಂದೆ ಅವರೇ ಜಲಸಂಪನ್ಮೂಲ ಸಚಿವರಾಗಿದ್ದ ಸಂದರ್ಭದಲ್ಲಿ ಆರಂಭಿಸಿದ್ದ ಈ ಕಾರ್ಯಕ್ರಮವನ್ನು, ಈ ಬಾರಿ ಇನ್ನಷ್ಟು ಅರ್ಥಪೂರ್ಣವಾಗಿ ಆಯೋಜಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

​ಕಳೆದ ವರ್ಷ ಮೊದಲ ಬಾರಿಗೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಆರಂಭಿಸಲಾಗಿತ್ತು. ಇಂತಹ ಸಾಂಪ್ರದಾಯಿಕ ಆಚರಣೆಗಳು ನಿಲ್ಲಬಾರದು ಎಂಬ ಸದುದ್ದೇಶದಿಂದ ಈ ವರ್ಷವೂ ಮುಂದುವರಿಸಲಾಗುತ್ತಿದೆ. ರಾಜ್ಯದಲ್ಲಿ ಬರ ಹಾಗೂ ತಮಿಳುನಾಡು ನೀರು ಹಂಚಿಕೆ ವಿವಾದಗಳಿದ್ದರೂ, ನಾಡಿನ ಸಂಸ್ಕೃತಿಯನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಅರ್ಥಪೂರ್ಣವಾಗಿ ಕಾರ್ಯಕ್ರಮ ನಡೆಯಲಿದೆ ಎಂದರು.

ಅಕ್ಟೋಬರ್ 11 ರಿಂದ ಆರಂಭವಾಗಲಿರುವ ಈ ಕಾವೇರಿ ಆರತಿಯನ್ನು ಮುಖ್ಯಮಂತ್ರಿಗಳೇ ಉದ್ಘಾಟಿಸಲಿದ್ದು, ಒಟ್ಟು ಆರು ದಿನಗಳ ಕಾಲ ಕಾರ್ಯಕ್ರಮ ಜರುಗಲಿದೆ ಎಂದು ಮಾಹಿತಿ ನೀಡಿದರು.

​ಪಾರ್ಕಿಂಗ್ ಸ್ಥಳದಿಂದ ವೇದಿಕೆವರೆಗೂ ಉಚಿತ ಬಸ್ ಸೌಲಭ್ಯ, ಲೋಕೋಪಯೋಗಿ ಇಲಾಖೆಯಿಂದ ರಸ್ತೆ ನಿರ್ಮಾಣ, ವಾರ್ತಾ ಇಲಾಖೆಯಿಂದ ಸಾರ್ವಜನಿಕರಿಗೆ ಪ್ರಚಾರ, ಮುಜರಾಯಿ ಇಲಾಖೆಯಿಂದ ಪಂಡಿತರ ನೇಮಕ, ಎಲ್‌ಇಡಿ ಪರದೆಗಳು, ಭವ್ಯ ವೇದಿಕೆ, ಧ್ವನಿ-ಬೆಳಕು ವ್ಯವಸ್ಥೆ, ವಾದ್ಯ, ಪೂಜಾ ಪರಿಕರಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ವ್ಯವಸ್ಥಿತವಾಗಿರಬೇಕು. ಯಾವುದೇ ಶಿಷ್ಟಾಚಾರ ಉಲ್ಲಂಘನೆಯಾಗದಂತೆ ಹಾಗೂ ಕಳೆದ ಬಾರಿಯ ಲೋಪದೋಷಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಮುಖ್ಯಮಂತ್ರಿಗಳು ಆಗಮಿಸುವುದರಿಂದ ‘ಡಿ-ಝೋನ್’ ಭದ್ರತಾ ನಿಯಮಗಳ ಪಾಲನೆಯಾಗಬೇಕು ಮತ್ತು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಮುಕ್ತ ಅವಕಾಶ ಕಲ್ಪಿಸಬೇಕು ಎಂದು ನಿರ್ದೇಶಿಸಿದರು.

*ವಿಡಿಯೋ ಕರೆ ಮೂಲಕ ಸಲಹೆ*
​ಇದೇ ವೇಳೆ, ಕಳೆದ ಬಾರಿಯ ಕಾವೇರಿ ಆರತಿಯ ಮೇಲ್ವಿಚಾರಣೆ ವಹಿಸಿದ್ದ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ರಾಮಪ್ರಸಾದ್ ಅವರೊಂದಿಗೆ ವಿಡಿಯೋ ಕಾಲ್ ಮೂಲಕ ಸಮಾಲೋಚನೆ ನಡೆಸಿದ ಸಚಿವರು, ಈ ವರ್ಷವೂ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಆರು ದಿನಗಳ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ರೂಪಿಸುವಂತೆ ಹಾಗೂ ಸ್ಥಳೀಯ ಅಧಿಕಾರಿಗಳಿಗೆ ಅಗತ್ಯ ಮಾರ್ಗದರ್ಶನ ನೀಡುವಂತೆ ಕೋರಿದರು.

ಸಭೆಯಲ್ಲಿ ಕಾವೇರಿ ಪ್ರತಿಮೆ ನಿರ್ಮಾಣ, ಪೂಜಾ ವಿಧಿವಿಧಾನಗಳು, ವಾರಣಾಸಿಯ ಅರ್ಚಕರ ತಂಡದ ವಾಸ್ತವ್ಯ ಮೊದಲಾದ ವಿವರಗಳನ್ನು ಪರಿಶೀಲಿಸಲಾಯಿತು.

ಕಾರ್ಯಕ್ರಮದ ಆರು ದಿನವೂ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಗೀತ ಸಂಜೆ, ಹಾಸ್ಯ ಸಂಜೆ ನಡೆಯಲಿದೆ.

​ಸಭೆಯಲ್ಲಿ ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ, ಜಿಪಂ ಸಿಇಒ ನಂದಿನಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯುಕ್ತೆ ಮಂಜುಶ್ರೀ ಹಾಗೂ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಉಪಸ್ಥಿತರಿದ್ದರು.

 

ಕಾವೇರಿ ಆರತಿ ಹೆಸರಲ್ಲಿ ರೈತರ ಭೂಮಿ ಸ್ವಾಧೀನಪಡಿಸಿಕೊಂಡು ಅಣೆಕಟ್ಟೆಯ ತಳಪಾಯದಲ್ಲಿ ಕಾಮಗಾರಿ ನಡೆಸಲು ಮುಂದಾಗಿದ್ದ ರಾಜ್ಯ ಸರಕಾರಕ್ಕೆ ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ರೈತ ಸಂಘಟನೆಗಳು ನ್ಯಾಯಾಲಯದ ಮೆಟ್ಟಿಲು ಏರಿದ್ದ ಕಾರಣ ಕಾವೇರಿ ಆರತಿ ಕಾಮಗಾರಿಗೆ  ನ್ಯಾಯಾಲಯ ತಡೆಯಾಜ್ಞೆ ನೀಡಿತ್ತು.

ಆಗ ದಸರಾ ಹೆಸರಿನಲ್ಲಿ ಕೆ ಆರ್ ಎಸ್ ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಹೆಸರಿನಲ್ಲಿ ಹಣ ಬಿಡುಗಡೆ ಮಾಡಿಕೊಂಡು ಬೆಂಗಳೂರು ಜಲಮಂಡಳಿ ಹೆಸರಿನಲ್ಲಿ ಕಾವೇರಿ ಆರತಿ ಮಾಡಲಾಗಿತ್ತು.ಮರಳಿ ಸರಕಾರ ವಿವಾದಿತ ಕಾವೇರಿ ಆರತಿಗೆ ಚಾಲನೆ ನೀಡುವ ಮೂಲಕ ದಸರಾವನ್ನು ಗೊಂದಲಗೊಳಿಸುವ ಅವಕಾಶ ಸೃಷ್ಟಿಸಿದಂತಾಗಿದೆ.

ಆ ಸಂಧರ್ಭದಲ್ಲಿ ದಸರಾ ಹೆಸರಿನಲ್ಲಿ ಹಣ

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles

error: Content is protected !!