ಮಂಡ್ಯ :-ಆ.೭ ರಾಜ್ಯ ಕಾಂಗ್ರೆಸ್ ಸರ್ಕಾರದ ಜನ ಮತ್ತು ರೈತ ವಿರೋಧಿ ನೀತಿ ವಿರುದ್ಧ ಬಿಜೆಪಿ ಪಕ್ಷದ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟಿಸಿದರು.
ಜಿಲ್ಲಾ ಬಿಜೆಪಿ ಘಟಕ, ರೈತ ಮೋರ್ಚಾ ಹಾಗೂ ಎಸ್ ಸಿ ಮೋರ್ಚಾ ಘಟಕದ ಆಶ್ರಯ ದಲ್ಲಿ ಸರ್ ಎಂ ವಿ ಪ್ರತಿಮೆ ಎದುರಿನಿಂದ ಮೆರವಣಿಗೆ ಹೊರಟ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದ ರಾಮಯ್ಯ,ಉಪ ಮುಖ್ಯ ಮಂತ್ರಿ ಡಿ.ಕೆ ಶಿವ ಕುಮಾರ್,ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶಿಸಿದರು.
ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ರೈತ ಮತ್ತು ಜನಪರ ಯೋಜನೆ ಗಳನ್ನು ರದ್ದು ಮಾಡುವ ಮೂಲಕ ಜನ ವಿರೋಧಿ ಆಡಳಿತ ನಡೆಸುತ್ತಿದೆ ಎಂದು ಕಿಡಿಕಾರಿ ದರು.
ಗ್ಯಾರಂಟಿ ಯೋಜನೆಯ ನೆಪದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಮೀಸಲಿರಿಸಿದ್ದ ೧೧ ಸಾವಿರ ಕೋಟಿ ಹಣವನ್ನು ದುರ್ಬಳಕೆ ಮಾಡಿಕೊಂಡಿದೆ .ರೈತರಿಗೆ ಅನುಕೂಲವಾಗುವ ಎಪಿಎಂಸಿ ಕಾಯ್ದೆ. ಕಿಸಾನ್ ಸಮ್ಮಾನ್ ಯೋಜನೆ ರದ್ದುಗೊಳಿಸುವ ಮೂಲಕ ರೈತರಿಗೆ ದ್ರೋಹ ಮಾಡಿದೆ ಎಂದು ಆರೋಪಿಸಿದರು.
೧೧ ಲಕ್ಷ ರೈತ ಕುಟುಂಬದ ವಿದ್ಯಾರ್ಥಿಗಳಿಗೆ ಅನುಕೂಲ ಯಾಗುವ ರೈತ ವಿದ್ಯಾನಿಧಿ ಯೋಜನೆಯನ್ನು ರದ್ದು ಪಡಿಸುವ ಮೂಲಕ ಬಡ ರೈತರ ಮಕ್ಕಳಿಗೆ ಅನ್ಯಾಯ ವೆಸಗಿದೆ, ಗೋಹತ್ಯೆ ತಡೆ ಹಾಗೂ ಜಾನುವಾರು ಸಂರಕ್ಷಿಸಲು ಪ್ರತಿ ಜಿಲ್ಲೆ ಗೊಂದು ಗೋಶಾಲೆಯನ್ನು ಸ್ಥಾಪಿಸಲು ಬಿಜೆಪಿ ಸರ್ಕಾರ ತೀರ್ಮಾನಿಸಿದ್ದನ್ನು ಅಕ್ರಮ ಗೋ ಸಾಗಾಣೆಕಾರರಿಗೆ ಲಾಭ ಮಾಡಿಕೊಡುವ ನಿಟ್ಟಿನಲ್ಲಿ ಯೋಜನೆಯನ್ನು ಹಿಂಪಡೆಯಲಾಗಿದೆ,ರಾಜ್ಯದ ಸುಮಾರು ೫೦ ಲಕ್ಷ ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿದ ರೈತರಿಗೆ ಭೂ ಸಿರಿ ಯೋಜನೆ ಯಲ್ಲಿ ೧೦,೦೦೦ ರೂ. ಹೆಚ್ಚುವರಿ ಸಹಾಯಧನ ನೀಡು ವುದನ್ನ ಸ್ಥಗಿತ ಮಾಡಲಾಗಿದೆ ಎಂದು ದೂರಿದರು.
ಕೇಂದ್ರ ಸರ್ಕಾರದ ಜೊತೆ ರಾಜ್ಯ ಸರ್ಕಾರ ಕೂಡ ಸುಮಾರು ೫೧ ಲಕ್ಷ ರೈತರಿಗೆ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಜಾರಿಗೆ ತಂದಿದ್ದನ್ನು ತಡೆ ಹಿಡಿಯಲು ಮುಂದಾಗಿದೆ.ರೈತರಿಗೆ ಪ್ರತಿ ಎಕರೆಗೆ ೨೫೦ ರೂ. ನಂತೆ, ೫ ಎಕರೆಗೆ ೧೨೫೦ ರೂ.ಗಳ ಡೀಸೆಲ್ ಸಹಾಯಧನ ನೀಡುವ ರೈತ ಶಕ್ತಿ ಯೋಜನೆಯನ್ನು ರದ್ದುಪಡಿಸುತ್ತಿದೆ. ಇದಲ್ಲದೆ ನೀರಾವರಿ ಯೋಜನೆಗಳನ್ನು ನಿರ್ಲಕ್ಷಿಸಿದ್ದು ನೀರಾವರಿ ಅನುದಾನವನ್ನು ೧೯ ಸಾವಿರ ಕೋಟಿ ರೂ.ಗೆ ಇಳಿಸಿದೆ.
ಕೃಷಿ ಭೂಮಿ ಮಾರಾಟ ಕಾಯ್ದೆ ರದ್ದು ಮಾಡಿರುವುದು ಸರಿಯಲ್ಲ ಈ ಕಾಯ್ದೆಯಲ್ಲಿ ಯಾರು ಬೇಕಾದರೂ ಕೃಷಿ ಜಮೀನನ್ನು ಕೊಂಡುಕೊಳ್ಳಬಹುದು ಎಂಬ ನಿಯಮಇತ್ತು. ಇದರಿಂದ ಕೃಷಿ ಜಮೀನುಗಳ ಮೌಲ್ಯ ಹೆಚ್ಚಾಗಿತ್ತು ಮತ್ತು ಕೃಷಿ ಪದವೀಧರ ವಿದ್ಯಾರ್ಥಿಗಳು ಕೂಡ ಜಮೀನನ್ನು ಖರೀದಿಸುವ ಮೂಲಕ ಹೊಸ ಕೃಷಿ ಪದ್ಧತಿಗಳ ಮೂಲಕ ಕೃಷಿಯನ್ನು ಮಾಡಲು ಅನುಕೂಲವಾಗಿತ್ತು, ಆದರೆ ಕಾಯ್ದೆ ರದ್ದು ಮಾಡಿರುವುದರಿಂದ ಕೃಷಿ ಭೂಮಿಯ ದರ ಕುಸಿದು ಕೃಷಿಕರಿಗೆ ಹೊಡೆತ ನೀಡಲಿದೆ ಎಂದು ದೂರಿದರು.
ಕಾಂಗ್ರೆಸ್ ಸರ್ಕಾರದ ಇಂತಹ ಜನವಿರೋಧಿ ನೀತಿಗಳಿಂದ ರೈತರು ಮತ್ತು ಬಡವರ್ಗದ ಜನರು ಮತ್ತು ಕೂಲಿ ಕಾರ್ಮಿಕರುಗಳಿಗೆ ತೊಂದರೆಯಾಗಲಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಪಕ್ಷದ ಮುಖಂಡರಾದ ಕೆ.ಸಿ. ನಂಜುAಡೇಗೌಡ, ರೈತ ಮೋರ್ಚಾ ಅಧ್ಯಕ್ಷ ಜೋಗಿ ಗೌಡ, ಎಸ್ ಸಿ ಮೋರ್ಚಾ ಅಧ್ಯಕ್ಷ ನಿತ್ಯಾನಂದ, ಸಿದ್ದರಾಮಯ್ಯ, ಅರವಿಂದ್,ಹನಿಯAಬಾಡಿ ನಾಗರಾಜು, ಸಿ ಟಿ ಮಂಜುನಾಥ್,ಶಿವಕುಮಾರ್ ಆರಾಧ್ಯ, ಮಂಜುನಾಥ್, ವಿವೇಕ್, ಚಾಮರಾಜು, ರವಿಕುಮಾರ್ ಡಣಾಯಕನಪುರ, ನಗರಸಭೆ ಮಾಜಿ ಸದಸ್ಯ ಶಿವಲಿಂಗಯ್ಯ,ಮಂಜುನಾಥ್ ನೇತೃತ್ವ ವಹಿಸಿದ್ದರು.