ಕೃಷ್ಣರಾಜಪೇಟೆ ಪಟ್ಟಣದ ಕರ್ನಾಟಕ ಪಬ್ಲಿಕ್ ಸ್ಕೂಲ್ ತನ್ನ ಗುಣಮಟ್ಟದ ಶಿಕ್ಷಣ ಹಾಗೂ ಅತ್ಯುತ್ತಮವಾದ ಶೈಕ್ಷಣಿಕ ವಾತಾವರಣದಿಂದಾಗಿ ಕೆ ಆರ್ ಪೇಟೆ ತಾಲೂಕಿನಲ್ಲಿಯೇ ಮಾದರಿ ಶಾಲೆಯಾಗಿ ಹೊರಹೊಮ್ಮಿದೆ ..
ನರ್ಸರಿಯಿಂದ ಹಿಡಿದು ದ್ವಿತೀಯ ಪಿಯುಸಿವರೆಗೆ ತರಗತಿಗಳನ್ನು ಹೊಂದಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ 2000ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.. ಖಾಸಗಿ ಶಾಲೆಗಳು ಹಾಗೂ ಕಾನ್ವೆಂಟ್ ಗಳಿಗೆ ಸೆಡ್ಡು ಹೊಡೆಯುವಂತೆ ಈ ಶಾಲೆಯಲ್ಲಿ ಪಾಠ ಪ್ರವಚನಗಳು ನಡೆಯುತ್ತಿರುವುದರಿಂದ ಪೋಷಕರು ಪೈಪೋಟಿಯ ಮೇರೆಗೆ ಈ ಶಾಲೆಗೆ ತಮ್ಮ ಮಕ್ಕಳನ್ನು ಸೇರಿಸುತ್ತಿದ್ದಾರೆ.. ಖಾಸಗಿ ಕಾನ್ವೆಂಟ್ ಗಳು ಹಾಗೂ ಶಾಲೆಗಳಲ್ಲಿ ಪ್ರವೇಶ ಪಡೆಯಬೇಕಾದರೆ ನೀಡಬೇಕಾಗುತ್ತದೆ. ಇದಕ್ಕೆ ಅಪವಾದ ಎನ್ನುವಂತೆ ಉಚಿತವಾಗಿ ಗುಣಮಟ್ಟದ ಶಿಕ್ಷಣ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಸಿಗುತ್ತಿರುವುದು ಈ ಶಾಲೆಯ ವಿಶೇಷವಾಗಿದೆ..
ಜಾಗತಿಕ ಜಗತ್ತಿನ ಸ್ಪರ್ಧಾ ಪ್ರಪಂಚದಲ್ಲಿ ತಮ್ಮ ಮಕ್ಕಳು ಆಂಗ್ಲ ಭಾಷೆಯಲ್ಲಿ ಶಿಕ್ಷಣ ಕಲಿಯಬೇಕು ಎನ್ನುವುದು ಪೋಷಕರ ವ್ಯಾಮೋಹವಾಗಿರುವುದರಿಂದ ಗೌರವ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅತ್ಯಲ್ಪ ಶುಲ್ಕವನ್ನು ಪಡೆದುಕೊಂಡು ಅತಿಥಿ ಶಿಕ್ಷಕರ ಮೂಲಕ ಆಂಗ್ಲ ಭಾಷೆಯಲ್ಲಿ ಶಿಕ್ಷಣ ನೀಡಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಶಾಲೆಯ ಪ್ರಾಂಶುಪಾಲ ಡಿಬಿ ಸತ್ಯ ತಿಳಿಸುತ್ತಾರೆ. ಕರ್ನಾಟಕ ಪಬ್ಲಿಕ್ ಶಾಲೆ ಸಾಧನೆ ಮಾಡಬೇಕು ಎನ್ನುವ ಬಡ ಮಕ್ಕಳಿಗೆ ದಾರಿ ಮಾರ್ಗವನ್ನು ತೋರುತ್ತಿರುವ ಹೆಮ್ಮೆಯ ಶಾಲೆಯಾಗಿ ತಾಲೂಕಿನಲ್ಲಿಯೇ ಮಾದರಿಯಾಗಿ ಮುಂದುವರೆಯುತ್ತಿದೆ..
ಕಂಪ್ಯೂಟರ್ ಶಿಕ್ಷಣ, ಊಟದ ಹಾಲ್, ಶಾಲಾ ಮೈದಾನ ಸೇರಿದಂತೆ ಮಕ್ಕಳ ಕಲಿಕೆಗೆ ಪೂರಕವಾಗಿರುವ ಎಲ್ಲಾ ರೀತಿಯ ಶೈಕ್ಷಣಿಕ ವಾತಾವರಣ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಇರುವುದು ವಿಶೇಷವಾಗಿದೆ..
ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರಾಂಶುಪಾಲ ಬಿಬಿ ಸತ್ಯ ಮಾತನಾಡಿ ಕರ್ನಾಟಕ ಪಬ್ಲಿಕ್ ಶಾಲೆಯು ಗ್ರಾಮೀಣ ಪ್ರದೇಶದ ಬಡ ಮಕ್ಕಳ ಶೈಕ್ಷಣಿಕ ವಿಕಾಸಕ್ಕೆ ವರದಾನವಾಗಿದೆ. ನಮ್ಮ ಶಾಲೆಯಲ್ಲಿ ಕಾನ್ವೆಂಟ್ ಗಳಿಗಿಂತಲೂ ವಿಭಿನ್ನವಾಗಿ ಶಾಲಾ ಸಮವಸ್ತ್ರ ಯೂನಿಫಾರಂ, ಟೈ, ಶೂಗಳು ಸೇರಿದಂತೆ ಪಠ್ಯ ಪುಸ್ತಕಗಳು ಹಾಗೂ ಶಾಲಾ ಬ್ಯಾಗ್ ಅನ್ನು ಉಚಿತವಾಗಿ ನೀಡಲಾಗುತ್ತಿದೆ. ಗ್ರಾಮೀಣ ಪ್ರದೇಶದ ಮಕ್ಕಳು ಅತ್ಯಂತ ಉತ್ಸುಕರಾಗಿ ಶಾಲೆಗೆ ಬರುತ್ತಿದ್ದಾರೆ. ನಮ್ಮ ಶಾಲೆಯು ಕೆ ಆರ್ ಪೇಟೆ ತಾಲೂಕಿನಲ್ಲಿ ಮಾದರಿ ಶಾಲೆಯಾಗಿ ಬೆಳೆಯಲು ಪೋಷಕರು ಹಾಗೂ ಸಾರ್ವಜನಿಕರ ಸಹಕಾರ ಅಪಾರವಾಗಿದೆ. ಪಾಂಡವಪುರ ಉಪ ವಿಭಾಗಾಧಿಕಾರಿ ಆಗಿದ್ದ ಡಾ. ಎಚ್ ಎಲ್ ನಾಗರಾಜು ಅವರ ವಿಶೇಷ ಆಸಕ್ತಿಯ ಫಲವಾಗಿ ಕೇವಲ 250 ಮಕ್ಕಳು ವ್ಯಾಸಂಗ ಮಾಡುತ್ತಿದ್ದ ಕೆಪಿಎಸ್ ಶಾಲೆಯಲ್ಲಿ ಇಂದು 2,000ಕ್ಕೂ ಹೆಚ್ಚಿನ ಮಕ್ಕಳು ಕಲಿಕೆಗೆ ಮುಂದಾಗಿದ್ದಾರೆ ಎನ್ನಲು ಹೆಮ್ಮೆ ಎನಿಸುತ್ತದೆ ಎಂದು ಅಭಿಮಾನದಿಂದ ಹೇಳಿದರು..
ವರದಿ…ಡಾ. ಕೆಆರ್ ನೀಲಕಂಠ ಕೃಷ್ಣರಾಜಪೇಟೆ ಮಂಡ್ಯ