ನಾಗಮಂಗಲ:ಮುಂದೆ ಚಲಿಸುತ್ತಿದ್ದ ಡಸ್ಟ್ ತುಂಬಿದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಧಾರುಣ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ರವಿ ವಾರ ಬೆಳಿಗ್ಗೆ ನಡೆದಿದೆ.
ಅಪಘಾತದಲ್ಲಿ ಶರತ್,ನವೀನ್, ಹೇಮಂತ್ ಸಾವನ್ನಪ್ಪಿದವರು ಎಂದು ತಿಳಿದು ಬಂದಿದೆ ಮತ್ತೋರ್ವನ ಮೃತನ ಹೆಸರು ಹಾಗೂ ಮೃತರ ವಿಳಾಸ ಖಚಿತವಾಗಿಲ್ಲ, ನೆಲಮಂಗಲ ಮತ್ತು ಮಾಗಡಿ ಮೂಲದವರು ಎಂದು ಹೇಳಲಾಗುತ್ತಿದೆ.
ಬೆಂಗಳೂರಿನಿಂದ ಹಾಸನ ಕಡೆ ಹೋಗುತ್ತಿದ್ದಾಗ ರವಿವಾರ ಬೆಳಗಿನ ಜಾವ ಸರಿಸುಮಾರು 5 ಗಂಟೆ ಸಮಯದಲ್ಲಿ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ
ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬರುವ ತಿರುಮಲಾಪುರ ಗೇಟ್ ಬಳಿ ಘಟನೆ ನಡೆದಿದೆ.
ಅಪಘಾತದಲ್ಲಿ ಕಾರಿನಲ್ಲಿ ತೆರಳುತ್ತಿದ್ದ ನಾಲ್ವರು ಮೃತಪಟ್ಟಿದ್ದಾರೆ ಅಪಘಾತದ ರಭಸಕ್ಕೆ ಕಾರಿನ ಮುಂಭಾಗದ ಸಂಪೂರ್ಣ ಜಖಂಗೊಂಡಿದೆ.
ಘಟನಾ ಸ್ಥಳಕ್ಕೆ ನಾಗಮಂಗಲ ಡಿವೈಎಸ್ಪಿ. ಲಕ್ಷ್ಮಿ ಪ್ರಸಾದ್, ಸಿಪಿಐ ನಿರಂಜನ್ ಹಾಗೂ ಬೆಳ್ಳೂರು. ಪೋಲಿಸ್ ಠಾಣೆ ಪಿಐ ಲೋಕೇಶ್ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.