ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಕರಡಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಸಿದ್ದಲಿಂಗಪ್ಪ ಅವರನ್ನು ಗ್ರಾಮ ಪಂಚಾಯಿತಿ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ ಎಂದು ನಾಗಮಂಗಲದ ರಾಮಣ್ಣ ಅವರು ತಿಳಿಸಿದ್ದಾರೆ.
ಮಂಗಳವಾರ ನಗರದ ಪತ್ರಿಕಾ ಭವನದಲ್ಲಿ ಮಾತನಾಡಿದ ಅವರು ,ನಾಗಮಂಗಲ ತಾಲ್ಲೂಕು ಕರಡ ಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಸಿದ್ದಲಿಂಗಪ್ಪ ಅವರನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅದಿನಿಯಮ 1993 ಪ್ರಕರಣ 43 ಎ ಅಡಿ ಗ್ರಾಮ ಪಂಚಾಯಿತಿ ಸದಸ್ಯತ್ವದಿಂದ ಅನರ್ಹ ಮಾಡಲಾಗಿದೆ ಎಂದು ತಿಳಿಸಿದರು .
ಇದೆ ನಿಯಮ 12ಎಲ್ ಅನ್ವಯ 6 ವರ್ಷಗಳ ಕಾಲ ಚುನಾವಣೆಗೆ ನಿಲ್ಲದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಅಪರ ಮುಖ್ಯ ಕಾರ್ಯದರ್ಶಿ ಗಳು ಆದೇಶಿಸಿದ್ದಾರೆ ಎಂದು ತಿಳಿಸಿದರು .
ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದ ಸಿದ್ದಲಿಂಗಪ್ಪ ಅವರು ತಮ್ಮ ಕಡೆಯವರಿಗೆ ಕಾಮಗಾರಿಗಳ ಗುತ್ತಿಗೆಯನ್ನು ಕೊಡಿಸಿ ಅವ್ಯವಹಾರ ನಡೆಸುತ್ತಿದ್ದರು. ಅಲ್ಲದೆ ಕಳಪೆ ಕಾಮಗಾರಿ ಮಾಡಿಸಿ ವಂಚನೆ ಮಾಡಿದ್ದಾರೆ ಎಂದು ದೂರಿದರು .
ಇವರೊಂದಿಗೆ ಅಧಿಕಾರಿಗಳು ಕೂಡ ಶಾಮೀಲಾಗಿದ್ದು ಹಣ ಬಿಡುಗಡೆ ಮಾಡಲು ಬಿಲ್ಲುಗಳಿಗೆ ಸಹಿ ಹಾಕಿದ್ದಾರೆ .ಈ ಬಗ್ಗೆ ಕರ್ನಾಟಕ ಲೋಕಾಯುಕ್ತ ಹಾಗೂ ಸಂಬಂಧಪಟ್ಟ ಇಲಾಖೆಗಳಿಗೆ ಮಾಹಿತಿ ಇದ್ದರೂ ಸಹ ಅಧಿಕಾರಿಗಳು ಬಿಲ್ ಪಾಸ್ ಮಾಡಿದ್ದು ಇವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಿಳಿಸಿದರು.
ತಾವು ಈ ಬಗ್ಗೆ ದೂರು ನೀಡಿದ ಪರಿಣಾಮ ಸಿದ್ದಲಿಂಗಪ್ಪ ಅವರ ಮೇಲೆ ಕ್ರಮ ಕೈಗೊಂಡು ಪಂಚಾಯಿತಿ ಸದಸ್ಯತ್ವದಿಂದ ಅನರ್ಹ ಗೊಳಿಸಲಾಗಿದೆ ಎಂದು ತಿಳಿಸಿದರು .
ಪತ್ರಿಕಾಗೋಷ್ಠಿಯಲ್ಲಿ ಭಗವಾನ್ ಚಕ್ರವರ್ತಿ ,ಗಿರೀಶ್ ಸೇರಿದಂತೆ ಇತರರಿದ್ದರು.