Thursday, December 5, 2024
spot_img

ಮಂಡ್ಯದಲ್ಲಿ ಒಳಸೇತುವೆ ನಿರ್ಮಾಣಾ:ರೈಲು ಸಂಚಾರ ರದ್ದು

ಒಳಸೇತುವೆ ನಿರ್ಮಾಣ ಕಾರಣ ಹಲವು ರೈಲುಗಳು ರದ್ದು

ಮಂಡ್ಯ ನಗರದಲ್ಲಿ ಒಳಸೇತುವೆ ನಿರ್ಮಾಣವಾಗುತ್ತಿರುವ ಹಿನ್ನೆಲೆಯಲ್ಲಿ*ಕೆಲವು ರೈಲುಗಳು ರದ್ದು/ಭಾಗಶಃ ರದ್ದು/ಮಾರ್ಗ ಬದಲಾವಣೆ/ನಿಯಂತ್ರಣ ಮಾಡಲಾಗಿದೆ.ಈ ಸಂಬಂದ ರೈಲ್ವೇ ಇಲಾಖೆ ಪ್ರಕಟಣೆ ಹೊರಡಿಸಿದೆ

ಮಂಡ್ಯ ನಿಲ್ದಾಣ ಹತ್ತಿರದ ಲೆವಲ್‌ ಕ್ರಾಸ್‌ ಗೇಟ್‌– 73ರ ಕೆಳ ಸೇತುವೆ ಕಾಮಗಾರಿಯ ಸಲುವಾಗಿ ಜುಲೈ 04 ರಿಂದ 31 ರವರೆಗೆ ಈ ಕೆಳಗಿನ ಕೆಲವು ರೈಲುಗಳನ್ನು ರದ್ದು/ಭಾಗಶಃ ರದ್ದು/ಮಾರ್ಗ ಬದಲಾವಣೆ ಮತ್ತು ನಿಯಂತ್ರಿಸಲಾಗುತ್ತಿದೆ. ಅವುಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿವೆ.

ರೈಲು ರದ್ದು:

  1. ಜುಲೈ 22 ರಂದು ಮೈಸೂರಿನಿಂದ ಪ್ರಾರಂಭಿಸುವ ರೈಲು ಸಂಖ್ಯೆ 06269 ಮೈಸೂರು – ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲನ್ನು ರದ್ದುಗೊಳಿಸಲಾಗುತ್ತಿದೆ.

ಭಾಗಶಃ ರದ್ದು:

  1. ರೈಲು ಸಂಖ್ಯೆ 06255 ಕೆ.ಎಸ್.ಆರ್ ಬೆಂಗಳೂರು – ಮೈಸೂರು ಮೆಮು ರೈಲನ್ನು ಜುಲೈ 17 ಮತ್ತು 22 ರಂದು ಮದ್ದೂರು-ಮೈಸೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ. ಈ ರೈಲು ಮದ್ದೂರಿನಲ್ಲಿ ತನ್ನ ಪ್ರಯಾಣ ಕೊನೆಗೊಳಿಸಲಿದೆ.
  2. ರೈಲು ಸಂಖ್ಯೆ 06560 ಮೈಸೂರು – ಕೆ.ಎಸ್‌.ಆರ್ ಬೆಂಗಳೂರು ಮೆಮು ರೈಲನ್ನು ಜುಲೈ 17 ಮತ್ತು 22 ರಂದು ಮೈಸೂರು-ಮದ್ದೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ. ಈ ರೈಲು ಮದ್ದೂರು ನಿಲ್ದಾಣದಿಂದ ಹೊರಡಲಿದೆ.
  3. ರೈಲು ಸಂಖ್ಯೆ 06267 ಅರಸೀಕೆರೆ – ಮೈಸೂರು ಎಕ್ಸ್‌ಪ್ರೆಸ್ ವಿಶೇಷ ರೈಲನ್ನು ಜುಲೈ 22 ರಂದು ಹಾಸನ-ಮೈಸೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ. ಈ ರೈಲು ಹಾಸನದಲ್ಲಿ ತನ್ನ ಪ್ರಯಾಣ ಕೊನೆಗೊಳಿಸಲಿದೆ.
  4. ರೈಲು ಸಂಖ್ಯೆ 06559 ಕೆ.ಎಸ್‌.ಆರ್ ಬೆಂಗಳೂರು – ಮೈಸೂರು ಮೆಮು ರೈಲನ್ನು ಜುಲೈ 26 ಮತ್ತು 31 ರಂದು ಮದ್ದೂರು-ಮೈಸೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ. ಈ ರೈಲು ಮದ್ದೂರು ನಿಲ್ದಾಣದಲ್ಲಿ ತನ್ನ ಪ್ರಯಾಣ ಕೊನೆಗೊಳಿಸಲಿದೆ.
  5. ರೈಲು ಸಂಖ್ಯೆ 06256 ಮೈಸೂರು – ಕೆ.ಎಸ್.ಆರ್ ಬೆಂಗಳೂರು ಮೆಮು ರೈಲನ್ನು ಜುಲೈ 26 ಮತ್ತು 31 ರಂದು ಮೈಸೂರು-ಮದ್ದೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ. ಈ ರೈಲು ಮದ್ದೂರು ನಿಲ್ದಾಣದಿಂದ ಹೊರಡಲಿದೆ.

ಮಾರ್ಗ ಬದಲಾವಣೆ:

  1. ಜುಲೈ 22 ಮತ್ತು 30 ರಂದು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ ಬೆಂಗಳೂರಿನಿಂದ ಪ್ರಾರಂಭವಾಗುವ ರೈಲು ಸಂಖ್ಯೆ 16585 ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು – ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು, ಬಾನಸವಾಡಿ, ಹೆಬ್ಬಾಳ, ಯಶವಂತಪುರ ಎ ಕ್ಯಾಬಿನ್‌, ಚಿಕ್ಕ ಬಾಣಾವರ, ನೆಲಮಂಗಲ, ಹಾಸನ ನಿಲ್ದಾಣಗಳ ಮೂಲಕ ಸಂಚರಿಸಲಿದೆ. ಹೀಗಾಗಿ ಬೆಂಗಳೂರು ಕಂಟೋನ್ಮೆಂಟ್, ಕೆ.ಎಸ್.ಆರ್ ಬೆಂಗಳೂರು, ಕೆಂಗೇರಿ, ರಾಮನಗರ, ಚನ್ನಪಟ್ಟಣ, ಮಂಡ್ಯ, ಮೈಸೂರು, ಕೃಷ್ಣರಾಜನಗರ ಮತ್ತು ಹೊಳೆ ನರಸಿಪುರ ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.

ತಡವಾಗಿ ಪ್ರಾರಂಭ/ನಿಯಂತ್ರಣ:

  1. ಜುಲೈ 23 ರಂದು ಮೈಸೂರಿನಿಂದ ಪ್ರಾರಂಭಿಸುವ ರೈಲು ಸಂಖ್ಯೆ 12610 ಮೈಸೂರು – ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲನ್ನು ಮೂಲ ನಿಲ್ದಾಣದಿಂದ 45 ನಿಮಿಷ ತಡವಾಗಿ ಮತ್ತು 30 ನಿಮಿಷ ಕಾಲ ಮಾರ್ಗ ಮಧ್ಯ ನಿಯಂತ್ರಿಸಲಾಗುತ್ತಿದೆ.
  2. ಜುಲೈ 23 ರಂದು ಬೆಂಗಳೂರಿನಿಂದ ಪ್ರಾರಂಭಿಸುವ ರೈಲು ಸಂಖ್ಯೆ 06559 ಕೆ.ಎಸ್‌.ಆರ್ ಬೆಂಗಳೂರು – ಮೈಸೂರು ಮೆಮು ರೈಲನ್ನು ಮೂಲ ನಿಲ್ದಾಣದಿಂದ 45 ನಿಮಿಷ ತಡವಾಗಿ ಮತ್ತು 30 ನಿಮಿಷ ಕಾಲ ಮಾರ್ಗ ಮಧ್ಯ ನಿಯಂತ್ರಿಸಲಾಗುತ್ತಿದೆ.
  3. ಜುಲೈ 23 ರಂದು ಮೈಸೂರಿನಿಂದ ಪ್ರಾರಂಭವಾಗುವ ರೈಲು ಸಂಖ್ಯೆ 06256 ಮೈಸೂರು – ಕೆ.ಎಸ್‌.ಆರ್ ಬೆಂಗಳೂರು ಮೆಮು ರೈಲನ್ನು 60 ನಿಮಿಷ ಕಾಲ ಮಾರ್ಗ ಮಧ್ಯ ನಿಯಂತ್ರಿಸಲಾಗುತ್ತಿದೆ.
  4. ಜುಲೈ 25 ರಂದು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ ಬೆಂಗಳೂರಿನಿಂದ ಪ್ರಾರಂಭವಾಗುವ ರೈಲು ಸಂಖ್ಯೆ 06270 ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ರೈಲನ್ನು ಮೂಲ ನಿಲ್ದಾಣದಿಂದ 70 ನಿಮಿಷ ಕಾಲ ತಡವಾಗಿ ಪ್ರಾರಂಭಿಸಲಾಗುತ್ತಿದೆ.

ಮಾರ್ಗ ಮಧ್ಯ ನಿಯಂತ್ರಣ:

  1. ಜುಲೈ 16 ರಂದು ಅಜ್ಮೀರ್‌ನಿಂದ ಪ್ರಾರಂಭವಾಗುವ ರೈಲು ಸಂಖ್ಯೆ 16209 ಅಜ್ಮೀರ್ – ಮೈಸೂರು ಎಕ್ಸ್‌ಪ್ರೆಸ್ ರೈಲನ್ನು ಹುಬ್ಬಳ್ಳಿ, ಮೈಸೂರು ಮತ್ತು ಬೆಂಗಳೂರು ವಿಭಾಗದಲ್ಲಿ ತಲಾ 30 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತಿದೆ.
  2. ಜುಲೈ 17 ರಂದು ಮಂಗಳೂರು ಸೆಂಟ್ರಲ್‌ನಿಂದ ಪ್ರಾರಂಭವಾಗುವ ರೈಲು ಸಂಖ್ಯೆ 16586 ಮಂಗಳೂರು ಸೆಂಟ್ರಲ್ – ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲನ್ನು ಮಾರ್ಗ ಮಧ್ಯ 45 ನಿಮಿಷ ಕಾಲ ನಿಯಂತ್ರಿಸಲಾಗುತ್ತಿದೆ.
  3. ಜುಲೈ 17 ರಂದು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್‌ ಬೆಂಗಳೂರಿನಿಂದ ಪ್ರಾರಂಭವಾಗುವ ರೈಲು ಸಂಖ್ಯೆ 06270 ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ರೈಲನ್ನು ಮಾರ್ಗ ಮಧ್ಯ 10 ನಿಮಿಷ ಕಾಲ ನಿಯಂತ್ರಿಸಲಾಗುತ್ತಿದೆ.
  4. ಜುಲೈ 21 ರಂದು ಅಜ್ಮೀರ್‌ನಿಂದ ಪ್ರಾರಂಭವಾಗುವ ರೈಲು ಸಂಖ್ಯೆ 16209 ಅಜ್ಮೀರ್ – ಮೈಸೂರು ಎಕ್ಸ್‌ಪ್ರೆಸ್ ರೈಲನ್ನು ಮಾರ್ಗ ಮಧ್ಯ 30 ನಿಮಿಷ ಕಾಲ ನಿಯಂತ್ರಿಸಲಾಗುತ್ತಿದೆ.
  5. ಜುಲೈ 22 ರಂದು ರೆಣಿಗುಂಟಾದಿಂದ ಪ್ರಾರಂಭವಾಗುವ ರೈಲು ಸಂಖ್ಯೆ 22136 ರೆಣಿಗುಂಟಾ – ಮೈಸೂರು ಎಕ್ಸ್‌ಪ್ರೆಸ್ ರೈಲನ್ನು ಮಾರ್ಗ ಮಧ್ಯ 75 ನಿಮಿಷ ಕಾಲ ನಿಯಂತ್ರಿಸಲಾಗುತ್ತಿದೆ.
  6. ಜುಲೈ 23 ರಂದು ಮೈಸೂರಿನಿಂದ ಪ್ರಾರಂಭವಾಗುವ ರೈಲು ಸಂಖ್ಯೆ 06256 ಮೈಸೂರು – ಕೆ.ಎಸ್.ಆರ್ ಬೆಂಗಳೂರು ಮೆಮು ರೈಲನ್ನು ಮಾರ್ಗ ಮಧ್ಯ 10 ನಿಮಿಷ ಕಾಲ ನಿಯಂತ್ರಿಸಲಾಗುತ್ತಿದೆ.
  7. ಜುಲೈ 23 ರಂದು ಮೈಸೂರಿನಿಂದ ಪ್ರಾರಂಭವಾಗುವ ರೈಲು ಸಂಖ್ಯೆ 17326 ಮೈಸೂರು – ಬೆಳಗಾವಿ ರೈಲನ್ನು ಮಾರ್ಗ ಮಧ್ಯ 30 ನಿಮಿಷ ಕಾಲ ನಿಯಂತ್ರಿಸಲಾಗುತ್ತಿದೆ.
  8. ಜುಲೈ 30 ರಂದು ಎಂ.ಜಿ.ಆರ್ ಚೆನ್ನೈ ಸೆಂಟ್ರಲ್‌ನಿಂದ ಪ್ರಾರಂಭವಾಗುವ ರೈಲು ಸಂಖ್ಯೆ 16021 ಎಂ.ಜಿ.ಆರ್ ಚೆನ್ನೈ ಸೆಂಟ್ರಲ್ – ಮೈಸೂರು ಎಕ್ಸ್‌ಪ್ರೆಸ್ ರೈಲನ್ನು ಮಾರ್ಗ ಮಧ್ಯ 90 ನಿಮಿಷ ಕಾಲ ನಿಯಂತ್ರಿಸಲಾಗುತ್ತಿದೆ.
  9. ಜುಲೈ 30 ರಂದು ತಿರುಪತಿಯಿಂದ ಪ್ರಾರಂಭವಾಗುವ ರೈಲು ಸಂಖ್ಯೆ 16220 ತಿರುಪತಿ – ಚಾಮರಾಜನಗರ ಎಕ್ಸ್‌ಪ್ರೆಸ್ ರೈಲನ್ನು ಮಾರ್ಗ ಮಧ್ಯ 30 ನಿಮಿಷ ಕಾಲ ನಿಯಂತ್ರಿಸಲಾಗುತ್ತಿದೆ.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe
- Advertisement -spot_img

Latest Articles

error: Content is protected !!