*ಟ್ರಯಲ್ ಬ್ಲಸ್ಟ್ ಕುರಿತು ರೈತರೊಂದಿಗೆ ಸಚಿವರ ಚರ್ಚೆ*
ಮಂಡ್ಯ.ಜು.06 (ಕರ್ನಾಟಕವಾರ್ತೆ):-
ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಇಂದು ಕೆ.ಆರ್.ಎಸ್ ಅಣೆಕಟ್ಟಿನ ಹತ್ತಿರ ಟ್ರಯಲ್ ಬ್ಲಾಸ್ಟ್ ನಡೆಸುವ ಸಂಬಂಧ ರೈತ ನಾಯಕರೊಂದಿಗೆ ಚರ್ಚೆ ನಡೆಸಿದರು.
ರೈತ ಮುಖಂಡರ ಅಭಿಪ್ರಾಯ ಸಂಗ್ರಹಿಸಿದ ನಂತರ ಮಾತನಾಡಿದ ಅವರು . ಅಣೆಕಟ್ಡು ನಿರ್ಮಾಣ ಕಷ್ಟಕರ ಎಂಬುದು ತಿಳಿದಿರುವ ವಿಷಯ, ಅಣೆಕಟ್ಟು ಸಂರಕ್ಷಣೆ ಸರ್ಕಾರದ ಮುಖ್ಯ ಜವಾಬ್ದಾರಿಯಾಗಿದೆ ಎಂದರು.
ಟ್ರಯಲ್ ಬ್ಲಸ್ಟ್ ನಡೆಸಲು ರೈತರ ವಿರೋಧವಿದೆ. ಇಂದು ಸಭೆಯಲ್ಲಿ ರೈತ ಮುಖಂಡರು ಅಭಿಪ್ರಾಯ ನೀಡಿದ್ದಾರೆ. ಇದರೊಂದಿಗೆ ಅಡ್ವಕೇಟ್ ಜನರಲ್ ಅಭಿಪ್ರಾಯ, ಡ್ಯಾಮ್ ಸೆಫ್ಟಿ ಕಮಿಟಿ, ಉನ್ನತ ಅಧಿಕಾರಿಗಳ ಅಭಿಪ್ರಾಯವನ್ನು ಪಡೆದು ಜುಲೈ 15 ರಂದು ನ್ಯಾಯಾಲಯದ ಮುಂದೆ ಮಂಡಿಸಲಾಗುವುದು ಎಂದರು.
*ಮುಖ್ಯಮಂತ್ರಿಗಳೊಂದಿಗೆ ಸಭೆ* ರೈತರ ಅಭಿಪ್ರಾಯ ಕುರಿತಂತೆ ಚರ್ಚಿಸಲು ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಸಭೆ ಆಯೋಜಿಸಲಾಗುವುದು. ಸಭೆ ನಡೆಯುವ ದಿನದಂದು ಆಯ್ದ ಐದು ರೈತ ಮುಖಂಡರು ಬೆಂಗಳೂರಿಗೆ ಆಗಮಿಸಿ ಸಭೆಯಲ್ಲಿ ಭಾಗವಹಿಸುವಂತೆ ತಿಳಿಸಿದರು.
ಟ್ರಯಲ್ ಬ್ಲಾಸ್ಟ್ ಗೆ ಸಂಬಂಧಿಸಿದಂತೆ
ಜು.15 ರಂದು ಕೋರ್ಟ್‌ಗೆ ಸಮಗ್ರ ಮಾಹಿತಿ ಕೊಡಲಿದ್ದೇವೆ. ಗೊಂದಲ ಬಗೆಹರಿಯದಿದ್ರೆ ಸಮಯಾವಕಾಶ ಕೇಳಲಾಗುವುದು.
ತಾಂತ್ರಿಕ ಸಮಿತಿ ಅಭಿಪ್ರಾಯ, ಅಧಿಕಾರಿಗಳ ಅಭಿಪ್ರಾಯ, ಬೇರೆ ಇರುತ್ತದೆ. ಎಲ್ಲಾ ಸಿದ್ದತೆ ಮಾಡಿಕೊಂಡು ಕೋರ್ಟ್ ಮುಂದೆ ಹೋಗುತ್ತೇವೆ. ಜುಲೈ 15 ರವರೆಗೆ ಟ್ರಯಲ್ ಬ್ಲಸ್ಟ್ ನಡೆಸುವುದಿಲ್ಲ ಎಂದರು.
ರೈತ ಮುಖಂಡರಾದ ಕೆಂಪೂಗೌಡ ಅವರು ಮಾತನಾಡಿ ಅಣೆಕಟ್ಟು ಕಟ್ಟುವುದು ಕಷ್ಟಕರ, ಇರುವ ಅಣೆಕಟ್ಟನ್ನು ಸಂರಕ್ಷಿಸಿಕೊಳ್ಳುವುದು ನಮ್ಮೆಲ್ಲರ ಹೊಣೆಯಾಗಿದೆ. ಕೆ.ಆರ್.ಎಸ್ ಸುತ್ತ ಗಣಿಗಾರಿಕೆ ನಡೆಸುವುದಿಲ್ಲ ಎಂದು ಸರ್ಕಾರದಿಂದ ಸುಗ್ರಿವಾಜ್ಞೆ ಹೊರಡಿಸಿ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ರೈತ ಮುಖಂಡ ಪ್ರಸನ್ನ ಗೌಡ ಅವರು ಮಾತನಾಡಿ ಡ್ಯಾಮ್ ಸೆಫ್ಟಿ ಅಕ್ಟ್
Dam safety act ಪ್ರಕಾರ ರಾಜ್ಯದಲ್ಲಿರುವ ಎಲ್ಲಾ ಅಣೆಕಟ್ಟುಗಳ ರಕ್ಷಣೆ ಮಾಡಲು ಹೊಸ ಕಾನೂನುಗಳನ್ನು ಜಾರಿಗೆ ತರಬೇಕು.ತಂತ್ರಜ್ಞಾನ ಮುಂದುವರಿದಿದೆ, ಒಂದು ಟ್ರಯಲ್ ಬ್ಲಾಸ್ಟ ನಡೆಸಿ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಮುಂದೆ ಅನುಮತಿ ನೀಡಿದಾಗ ಹಲವಾರು ಬ್ಲಾಸ್ಟ್ ಗಳ ಸಂದರ್ಭದಲ್ಲಿ ಪರಿಣಾಮ ಬೇರೆ ರೀತಿ ಇರಬಹುದು. ಲಕ್ಷಾಂತರ ಜನಕ್ಕೆ ಜೀವನ ನೀಡುವ ಅಣೆಕಟ್ಟಿನ 25 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ಮಾಡಬಾರದು. ಇದು ಕೇವಲ ಕೆ.ಆರ್.ಎಸ್ ಮಾತ್ರವಲ್ಲ ರಾಜ್ಯದ ಎಲ್ಲಾ ಅಣೆಕಟ್ಟಿಗೆ ಅನ್ವಯಿಸಬೇಕು ಎಂದು ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದರು.
ಸಭೆಯಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ಹಾಗೂ ಶ್ರೀರಂಗಪಟ್ಟಣ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ಮಂಡ್ಯ ಶಾಸಕ ಪಿ.ರವಿಕುಮಾರ್, ಜಿಲ್ಲಾಧಿಕಾರಿ ಡಾ: ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ಕಾನೀನಿನಿ ವ್ಯವಸ್ಥಾಪಕ ನಿರ್ದೇಶಕ ಮಹೇಶ್, ತಾಂತ್ರಿಕ ಅಧಿಕಾರಿ ಶಿವಪ್ರಸಾದ್ ಹಾಗೂ ಇನ್ನಿತರೆ ಗಣ್ಯರು ಉಪಸ್ಥಿತರಿದ್ದರು.