ಮಂಡ್ಯ:ಮೇ.16
ಮಂಡ್ಯ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಪರಾಜಿತನಾಗಿದ್ದರೂ ಮುಂದಿನ ದಿನಗಳನ್ನು ರೈತಪರ ಸಮಾಜಮುಖಿ ಹೋರಾಟಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಸಾರ್ವಜನಿಕ ಜೀವನದಲ್ಲಿ ಮುಂದುವರೆಯುತ್ತೇನೆ ಎಂದು ಮಂಡ್ಯ ಕ್ಷೇತ್ರದ ಸರ್ವೋದಯ ಕರ್ನಾಟಕ ಪಕ್ಷದ ಪರಾಜಿತ ಅಭ್ಯರ್ಥಿ ಮಧುಚಂದನ್ ಎಸ್.ಸಿ. ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ರೈತ ಸಂಘ ಬೆಂಬಲಿತ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನನಗೆ ರೈತ ಸಂಘದ ಕಾರ್ಯಕರ್ತರು, ಸರ್ವೋದಯ ಕರ್ನಾಟಕ ಪಕ್ಷದ ಪದಾಧಿಕಾರಿಗಳು, ನನ್ನ ಸಹೋದ್ಯೋಗಿಗಳು, ಸ್ನೇಹಿತರುಗಳು ಹಾಗೂ ಬಂಧುಗಳು ನನ್ನೊಂದಿಗೆ ಹಗಲಿರಲು ಶ್ರಮಿಸಿದ್ದಾರೆ. ಇವರೆಲ್ಲರಿಗೂ ನನ್ನ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದಿರುವ ಅವರು, ಪ್ರಜಾಪ್ರಭುತ್ವದಲ್ಲಿ ಪ್ರಜೆಗಳ ತೀರ್ಮಾನವೆ ಅಂತಿಮವಾಗಿದ್ದು ಜನಾದೇಶಕ್ಕೆ ನಾವೆಲ್ಲರೂ ಕೂಡ ತಲೆ ಬಾಗಬೇಕಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.