ಪಾಂಡವಪುರ : ಗ್ರಾಮ ಲೆಕ್ಕಿಗರೊಬ್ಬರಿಂದ ಲಂಚ ಸ್ವೀಕಾರ ಮಾಡುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಾಂಡವಪುರ ತಹಶೀಲ್ದಾರ್ ಕೆ.ಸಿ.ಸೌಮ್ಯ ಅವರಿಗೆ ಶ್ರೀರಂಗಪಟ್ಟಣ ನ್ಯಾಯಾಲಯವು ಜಾಮೀನು ಅರ್ಜಿ ತಿರಸ್ಕೃತಗೊಳಿಸಿ ಆದೇಶ ಹೊರಡಿಸಿದೆ.
ತಹಸೀಲ್ದಾರ್ ಕೆ.ಸಿ.ಸೌಮ್ಯ ಅವರು ಕಳೆದ ವಾರ ಗ್ರಾಮ ಲೆಕ್ಕಿಗ ಮರಿಸ್ವಾಮಿ ಅವರಿಂದ ಸ್ಥಳ ನಿಯೋಜನೆಗಾಗಿ 40 ಸಾವಿರ ರೂಪಾಯಿ ಲಂಚದ ಹಣ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದರು.
ಇಂದು ಶ್ರೀರಂಗಪಟ್ಟಣದ 3ನೇ ಹೆಚ್ಚುವರಿ ನ್ಯಾಯಾಲಯದಲ್ಲಿ ಜಾಮೀನಿಗೆ ನಿರಾಕರಣೆ ಮಾಡಿದ್ದು ಜಾಮೀನು ಅರ್ಜಿಯನ್ನು ತಿರಸ್ಕೃತಗೊಳಿಸಿ ಜಿಲ್ಲಾ
ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.