ವಿಜಯಪುರ: ಆಸ್ತಿ ವಿವರ ಸಲ್ಲಿಸದ ಪಾಲಿಕೆ ಸದಸ್ಯರು ಅನರ್ಹಗೊಳಿಸಿ ಆದೇಶ
ವಿಜಯಪುರ ಮಹಾನಗರ ಪಾಲಿಕೆಯ ಎಲ್ಲ 35 ಸದಸ್ಯರು ತಮ್ಮ ಸ್ಥಿರಾಸ್ತಿ ಮತ್ತು ಚರಾಸ್ತಿ ವಿವರವನ್ನು ಮೇಯರ್ ಅವರಿಗೆ ನಿಗದಿತ ಅವಧಿಯೊಳಗೆ ಸಲ್ಲಿಸದ ಕಾರಣ ಅವರನ್ನು ಅನರ್ಹಗೊಳಿಸಿ, ಬೆಳಗಾವಿ ಪ್ರಾದೇಶಿಕ ಆಯುಕ್ತ ಎಸ್.ಬಿ. ಶೆಟ್ಟಣ್ಣವರ ಆದೇಶ ಹೊರಡಿಸಿದ್ದಾರೆ.
ಬಿಜೆಪಿಯ 17, ಕಾಂಗ್ರೆಸ್‌ನ 10, ಎಐಎಂಐಎಂ 2, ಜೆಡಿಎಸ್ 1 ಹಾಗೂ ಪಕ್ಷೇತರ 5 ಸದಸ್ಯರು ಸೇರಿ ಎಲ್ಲ ಸದಸ್ಯರು ಅನರ್ಹರಾಗಿದ್ದಾರೆ. ಮೇಯರ್, ಉಪಮೇಯರ್ ಸೇರಿ ಯಾರೂ ಆಸ್ತಿ ವಿವರ ಸಲ್ಲಿಸಿಲ್ಲ.
ಆಸ್ತಿ ವಿವರ ನೀಡದಿರುವುದನ್ನು ಪ್ರಶ್ನಿಸಿ ಮತ್ತು ಅವರ ಸದಸ್ಯತ್ವ ರದ್ದುಗೊಳಿಸಲು ಕೋರಿ ಪಾಲಿಕೆಯ ಮಾಜಿ ಸದಸ್ಯರಾದ ಬಿಜೆಪಿಯ ಪ್ರಕಾಶ ಮಿರ್ಜಿ ಮತ್ತು ಕಾಂಗ್ರೆಸ್‌ನ ಮೈನುದ್ದೀನ್ ಬೀಳಗಿ ಕಲಬುರಗಿ ಹೈಕೋರ್ಟ್ ಪೀಠದಲ್ಲಿ ದೂರು ದಾಖಲಿಸಿದ್ದರು.