ಮಂಡ್ಯ: ಜಿಲ್ಲೆಯ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಚುನಾಯಿತ ಕೌನ್ಸಿಲ್ ಅವಧಿಯು ಮುಕ್ತಾಯವಾಗಿದೆ. ಆದ್ದರಿಂದ ಕರ್ನಾಟಕ ಪೌರಸಭೆಗಳ ಕಾಯ್ದೆ ಪ್ರಕಾರ, ಅವಧಿ ಮುಕ್ತಾಯಗೊಂಡಿರುವ ಸ್ಥಳೀಯ ಸಂಸ್ಥೆಗಳಿಗೆ ಹೊಸ ಚುನಾಯಿತ ಕೌನ್ಸಿಲ್ ಅಸ್ತಿತ್ವಕ್ಕೆ ಬರುವವರೆಗೆ ಆಡಳಿತ ಹಿತದೃಷ್ಟಿಯಿಂದ ಆಡಳಿತಾಧಿಕಾರಿಗಳನ್ನು ನೇಮಿಸಲಾಗಿದೆ.
ಮಂಡ್ಯ ಜಿಲ್ಲೆಯಲ್ಲಿ ಒಟ್ಟು 8 ನಗರ ಸ್ಥಳೀಯ ಸಂಸ್ಥೆಗಳಿವೆ. ಅವುಗಳಲ್ಲಿ ಮಂಡ್ಯ ನಗರಸಭೆ (ನ.3) ಮತ್ತು ಮದ್ದೂರು ನಗರಸಭೆ (ಅ.24) ಚುನಾಯಿತ ಆಡಳಿತ ಮಂಡಳಿ ಅವಧಿ ಮುಕ್ತಾಯವಾಗಿದ್ದು, ಜಿಲ್ಲಾಧಿಕಾರಿ ಕುಮಾರ ಅವರು ಆಡಳಿತಾಧಿಕಾರಿಯಾಗಿ ನೇಮಕವಾಗಿದ್ದಾರೆ.
ಮಳವಳ್ಳಿ ಪುರಸಭೆ ಆಡಳಿತ ಮಂಡಳಿ ಅವಧಿ ಅ.24ಕ್ಕೆ ಮುಕ್ತಾಯವಾಗಿದ್ದು, ಮಂಡ್ಯ ಉಪವಿಭಾಗಾಧಿಕಾರಿ ಶಿವಮೂರ್ತಿ ಆಡಳಿತಾಧಿಕಾರಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ.
ಶ್ರೀರಂಗಪಟ್ಟಣ ಪುರಸಭೆ (ನ.6), ಪಾಂಡವಪುರ ಪುರಸಭೆ (ಅ.24), ಕೆ.ಆರ್.ಪೇಟೆ ಪುರಸಭೆ (ನ.1), ನಾಗಮಂಗಲ ಪುರಸಭೆ (ನ.6), ಆಡಳಿತ ಮಂಡಳಿ ಮುಕ್ತಾಯವಾಗಿದ್ದು, ಪಾಂಡವಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್ ಆಡಳಿತಾಧಿಕಾರಿಯಾಗಿ ನೇಮಕವಾಗಿದ್ದಾರೆ.
ಬೆಳ್ಳೂರು ಪಟ್ಟಣ ಪಂಚಾಯಿತಿಗೆ (ನ.5) ನಾಗಮಂಗಲ ತಹಶೀಲ್ದಾರ್ ಅವರು ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ


