ಮಂಡ್ಯ.ಫೆ.23(ಕರ್ನಾಟಕವಾರ್ತೆ):- ಮುಂಬರುವ 2024 ರ ಲೋಕಸಭೆ ಸಾರ್ವತ್ರಿಕ ಚುನಾವಣೆ ನಿಮಿತ್ತ ಅಬಕಾರಿ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಮುಂಬರುವ ಲೋಕಸಭಾ ಚುನಾವಣೆಗಳನ್ನು ನಡೆಸುವ ದಿಸೆಯಲ್ಲಿ ಕಾರ್ಯೋನ್ಮುಖರಾಗುವ ಬಗ್ಗೆ ಅಬಕಾರಿ ಇಲಾಖೆಯು ಜಿಲ್ಲಾ ಮಟ್ಟದಲ್ಲಿ ಟೋಲ್ ಫ್ರೀ ತೆರೆಯಲಾಗಿರುತ್ತದೆ. ಸಾರ್ವಜನಿಕರು ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಅಕ್ರಮವಾಗಿ ಮದ್ಯ ತಯಾರಿಕೆ, ಶೇಖರಣೆ, ಸಾಗಾಣಿಕೆ, ಮಾರಾಟ ಹಾಗೂ ಅಕ್ರಮವಾಗಿ ಮದ್ಯ ತಯಾರಿಕಾ ವಸ್ತುಗಳು ಮತ್ತು ಗಾಂಜಾ, ಅಫೀಮು, ಡ್ರಗ್ಸ್ ಹಾಗೂ ಇನ್ನಿತರ ಯಾವುದೇ ಮಾದಕ ವಸ್ತುಗಳ ಬಗ್ಗೆ ಯಾವುದೇ ದೂರುಗಳಿದ್ದಲ್ಲಿ ಮಂಡ್ಯ ಜಿಲ್ಲಾ ಅಬಕಾರಿ ಟೋಲ್ ಫ್ರೀ 18004253854 ಸಂಖ್ಯೆಗೆ ಹಾಗೂ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಮಂಡ್ಯ ಡೆಪ್ಯೂಟಿ ಕಮೀಷನರ್ ಆಫ್ ಎಕ್ಸೆöÊಜ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.