ಮಲ್ಲಯ್ಯನದೊಡ್ಡಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ
14/09/2025
ಮಂಡ್ಯ: ತಾಲ್ಲೂಕಿನ ಮಲ್ಲಯ್ಯನದೊಡ್ಡಿ ಗ್ರಾಮದ ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಶನಿವಾರ ಪತ್ತೆಯಾಗಿದೆ.
ಗ್ರಾಮದ ನಂದೀಶ್ ಅವರ ಪತ್ನಿ ಹರ್ಷಿತಾ (25) ಮೃತಪಟ್ಟವರು. ಮದ್ದೂರು ತಾಲ್ಲೂಕಿನ ಹೆಮ್ಮನಹಳ್ಳಿ ಗ್ರಾಮದ ಹರ್ಷಿತಾ ಅವರನ್ನು ಎಂಟು ವರ್ಷದ ಹಿಂದೆ ನಂದೀಶ್‌ಗೆ ಮದುವೆ ಮಾಡಿಕೊಡಲಾಗಿತ್ತು. ಹರ್ಷಿತಾ ಅವರ ಪೋಷಕರು ಪತಿ ಮತ್ತು ಕುಟುಂಬಸ್ಥರ ವಿರುದ್ಧ ಕೊಲೆ ಆರೋಪ ಮಾಡಿ ದೂರು ದಾಖಲಿಸಿದ್ದಾರೆ.
ಹರ್ಷಿತಾ ಅವರಿಗೆ ಇಬ್ಬರು ಮಕ್ಕಳು ಇದ್ದಾರೆ. ಪತಿ ಮತ್ತು ಪತ್ನಿಯ ನಡುವೆ ಕೌಟುಂಬಿಕ ಕಲಹ ಇತ್ತು ಎನ್ನಲಾಗುತ್ತಿದ್ದು, ಹಲವು ಬಾರಿ ನ್ಯಾಯ ಪಂಚಾಯಿತಿ ಮಾಡಲಾಗಿತ್ತು ಎಂದು ಹೇಳಲಾಗುತ್ತಿದೆ. ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.