ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡ್ಯ ಜಿಲ್ಲೆಯಲ್ಲಿ ನಡೆಯುವ ೮೭ ನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ ಮಾಡಿದರು.
ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ,ಶಾಸಕರಾದ ರಮೇಶ್ ಬಾಬು ಬಂಡಿ ಸಿದ್ದೇಗೌಡ, ಪಿ.ಎಂ ನರೇಂದ್ರ ಸ್ವಾಮಿ, ಉದಯ ಗೌಡ,ದಿನೇಶ್ ಗೂಳಿಗೌಡ
ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾದ್ಯಕ್ಷರಾದ ನಾಡೋಜ ಮಹೇಶ್ ಜೋಷಿ,ಕ.ಸಾ.ಪ ಮಂಡ್ಯ ಜಿಲ್ಲಾಧ್ಯಕ್ಷರಾದ ಮೀರಾ ಶಿವಕುಮಾರ್ ಮಂಡ್ಯ ಜಿಲ್ಲಾಧಿಕಾರಿ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಾದ ಶ್ರೀಮತಿ ಧರಣಿ ದೇವಿ ಮಾಲಗತ್ತಿ ಹಾಗೂ ಲಾಂಛನ ರಚಿಸಿದ ಕಲಾವಿದ ಶಂಕರ್, ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಹಾಜರಿದ್ದರು