ವೈದ್ಯರ ನಿರ್ಲಕ್ಷ್ಯ:ತನಿಖೆಗೆ ಆದೇಶ
ಬೆಂಗಳೂರು:ನಾಯಿ ಕಡಿತಕ್ಕೆ ಸಕಾಲಕ್ಕೆ ಚಿಕಿತ್ಸೆ ಸಿಗದೆ ಅಪಘಾತದಲ್ಲಿ ಮೃತಪಟ್ಟ ಬಾಲಕಿ ಹೃತೀಕ್ಷಾ ಪ್ರಕರಣದಲ್ಲಿ ಮಂಡ್ಯ ಜಿಲ್ಲೆಯ ಮದ್ದೂರು ವೈದ್ಯಾಧಿಕಾರಿ ನಿರ್ಲಕ್ಷದ ವಿರುದ್ದ ತನಿಖೆ ನಡೆಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಇಲಾಖೆ ನಿರ್ದೇಶನಾಲಯ ಆದೇಶ ಹೊರಡಿಸಿದೆ.
ಕಳೆದ ಮೇ ೨೬ ರಂದು ಮದ್ದೂರು ತಾಲೋಕು ಆಸ್ಪತ್ರೆಯಲ್ಲಿ ನಾಯಿ ಕಡಿತಕ್ಕೆ ಸೂಕ್ತ ಚಿಕಿತ್ಸೆ ಸಿಗದೆ ಹೆಚ್ಚಿನ ಚಿಕಿತ್ಸೆಗಾಗಿ ಪೋಷಕ ರೊಂದಿಗೆ ಮಂಡ್ಯಕ್ಕೆ ತೆರಳುತ್ತಿದ್ದಾಗ ರಸ್ತೆ ಅಪಘಾತದಲ್ಲಿ ಹೃತೀಕ್ಷಾ ಎಂಬ ಬಾಲಕಿ ಮೃತಪಟ್ಟಿದ್ದಳು.
ಹಿನ್ನೆಲೆಯಲ್ಲಿ ಮದ್ದೂರು ವೈದ್ಯಾಧಿಕಾರಿಗಳ ನಿರ್ಲಕ್ಷದ ವಿರುದ್ದ ಕರುನಾಡ ಸೇವಕರು ಸಂಘಟನೆಯ ಮೈಸೂರು ವಿಭಾಗೀಯ ಅಧ್ಯಕ್ಷ ಎಂ.ಬಿ.ನಾಗಣ್ಣಗೌಡ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕರಿಗೆ ದೂರು ನೀಡಿ.ಮಗುವಿಗೆ ತುರ್ತು ಚಿಕಿತ್ಸೆ ಅಗತ್ಯವಿದ್ದರು ಅಂಬುಲೆನ್ಸ್ ವ್ಯವಸ್ಥೆ ಮಾಡದೆ ಅಗತ್ಯ ಚಿಕಿತ್ಸೆ ನೀಡದೆ ಉಪಚರಿಸದೆ ಮದ್ದೂರು ತಾಲೋಕು ಆಸ್ಪತ್ರೆ ವೈದ್ಯಾಧಿಕಾರಿಗಳು ತೀವ್ರ ನಿರ್ಲಕ್ಷ್ಯ ವಹಿಸಿರುತ್ತಾರೆ.
ಈ ರೀತಿಯ ಪ್ರಕರಣಗಳು ರಾಜ್ಯದ ಯಾವುದೆ ಆಸ್ಪತ್ರೆಯಲ್ಲಿ ಜರುಗದಂತೆ ಅಗತ್ಯ ತನಿಖೆ ನಡೆಸಿ ಕ್ರಮವಹಿಸುವಂತೆ ದೂರಿದ್ದರು.
ಈ ಹಿನ್ನೆಲೆಯಲ್ಲಿ ನಿರ್ದೇಶನಾಲಯದ ಜಾಗೃತ ಅಧಿಕಾರಿ ಆದೇಶ ಹೊರಡಿಸಿ ತನಿಖೆ ನಡೆಸಿ ೩೦ ದಿನಗಳೊಳಗೆ ವರದಿ ನೀಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಇಲಾಖೆಯ ಮೈಸೂರು ವಿಭಾಗೀಯ ಅಧಿಕಾರಿಗೆ ಆದೇಶಿಸಿದ್ದಾರೆ.