ಹೊರಗುತ್ತಿಗೆ ನೇಮಕಕ್ಕೆ ಸಹಕಾರ ಸೊಸೈಟಿ
ವಿವಿಧ ಇಲಾಖೆಗಳು ಮತ್ತು ನಿಗಮ, ಮಂಡಳಿಗಳಿಗೆ ಹೊರಗುತ್ತಿಗೆ ನೌಕರರನ್ನು ಖಾಸಗಿ ಸಂಸ್ಥೆಗಳ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅದರ ಬದಲು, ಸಹಕಾರ ಸೊಸೈಟಿ ರಚಿಸಿ ಆ ಮೂಲಕ ನೇಮಕಾತಿ ಮಾಡುವ ಕುರಿತು ಸಾಧಕ–ಬಾಧಕಗಳನ್ನು ಅಧ್ಯಯನ ಮಾಡಿ ಸಚಿವ ಸಂಪುಟಕ್ಕೆ ಶಿಫಾರಸು ಮಾಡಲು ಸಂಪುಟ ಉಪಸಮಿತಿ ರಚಿಸಲು ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಎಚ್ ಕೆ ಪಾಟೀಲ್ ಅವರು ಹೇಳಿದರು.
ಲಕ್ಷಾಂತರ ನೌಕರರು ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ. ಈ ನೌಕರರಿಗೆ ಸೇವಾ ಭದ್ರತೆ ಮತ್ತು ಎಲ್ಲ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಸಮಿತಿ ಶಿಫಾರಸುಗಳನ್ನು ಮಾಡಲಿದೆ. ಅಲ್ಲದೇ, ಹೊರಗುತ್ತಿಗೆ ನೌಕರರು ಶೋಷಣೆಗೆ ಒಳಗಾಗುವುದನ್ನು ತಪ್ಪಿಸಲು ಹಾಗೂ ಅಪಾಯಕಾರಿ ಸೇವೆ ಸಲ್ಲಿಸುವ ನೌಕರರ ಹಿತರಕ್ಷಣೆ ಮಾಡುವ ದೃಷ್ಟಿಯಿಂದ ಉಪಸಮಿತಿ ಶಿಫಾರಸಿನ ಆಧಾರದ ಮೇಲೆ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.